ಸಹಸ್ರ ಲಿಂಗ
ಗೋಚರ
ಈ ಲೇಖನದಿಂದ ಬೇರೆ ಯಾವುದೇ ಲೇಖನಕ್ಕೆ ಬಾಹ್ಯ ಸಂಪರ್ಕ ಹೊಂದಿಲ್ಲ. |
ಸಹಸ್ರ ಲಿಂಗವು ಸಿರ್ಸಿ-ಯಲ್ಲಾಪುರ ರಸ್ತೆಯಲ್ಲಿ ಸಿರ್ಸಿಯಿಂದ ಸುಮಾರು ೧೨ ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ ೦.೫ ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ.ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.
ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ. ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಸಿರ್ಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ.ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಿಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.